ಡಿಪ್ಲೋಮಾ ಪ್ರವೇಶಾತಿ: ವಿಶೇಷಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಮೈಸೂರಿನ ಜೆ.ಎಸ್.ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಮೂರು ವರ್ಷಗಳ ಅವಧಿಯ ಡಿಪ್ಲೋಮಾ ಕೋರ್ಸುಗಳ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇ. 35 ಅಂಕಗಳೊಂದಿಗೆ ತೇರ್ಗಡೆ ಹೊಂದಿರುವ ಅರ್ಹ ವಿಶೇಷಚೇತನ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 17 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.jsspda.org, ಪ್ರಾಂಶುಪಾಲರು, ಜೆ.ಎಸ್.ಎಸ್ ವಿಶೇಷಚೇತನರ ಪಾಲಿಟೆಕ್ನಿಕ್, ಜೆ.ಎಸ್.ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಛಯ, ಮೈಸೂರು, ದೂ.ಸಂಖ್ಯೆ: 0821-2548315, 2548316, ಮೊ.ನಂ: 9844644937 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.