ಡಿಪ್ಲೋಮಾ ಪ್ರವೇಶಾತಿ: ಅವಧಿ ವಿಸ್ತರಣೆ

ಉಡುಪಿ: ಪ್ರಸಕ್ತ ಸಾಲಿಗೆ ಉಡುಪಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸುಗಳ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ / ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 30 ರ ವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ಮೊ.ನಂ: 9482492778, 9480320935 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಕಚೇರಿ ಪ್ರಕಟಣೆ ತಿಳಿಸಿದೆ.