ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿoಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಡಿಪ್ಲೋಮಾ ಕೋರ್ಸ್ ಪ್ರವೇಶಾತಿ ಪ್ರಾರಂಭವಾಗಿದ್ದು, ಐಟಿಐ ಹಾಗೂ ಪಿಯುಸಿ (ವಿಜ್ಞಾನ) ಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಲ್ಯಾಟರಲ್ ಎಂಟ್ರಿ ಸ್ಕೀಮ್ ಮೂಲಕ 2 ನೇ ವರ್ಷ/ 3 ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್ಗೆ ಪ್ರವೇಶ ಪಡೆಯಬಹುದಾಗಿದೆ.

ಪ್ರವೇಶಾತಿಯ ಅವಧಿ ಶೀಘ್ರವೇ ಮುಗಿಯಲಿದ್ದು, ಸೀಮಿತ ಸಂಖ್ಯೆಯ ಸೀಟುಗಳು ಮಾತ್ರ ಸಂಸ್ಥೆಯಲ್ಲಿ ಲಭ್ಯವಿವೆ. ಹೆಚ್ಚಿನ ಮಾಹಿತಿಗೆ ಮೊ.ನಂ: 8124489163, ದೂ.ಸಂಖ್ಯೆ: 0821-2516322 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.