ಮಣಿಪಾಲ: ಡಾ. ಟಿ.ಎಂ.ಎ. ಪೈ ಪಾಲಿಟೆಕ್ನಿಕ್ Dr. T.M.A. Pai Polytechnicನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ.
ಲಭ್ಯವಿರುವ ಕೋರ್ಸ್ ಗಳು
ಸಂಸ್ಥೆಯಲ್ಲಿ ಆಟೋಮೊಬೈಲ್, ಸಿವಿಲ್, ಕಂಪ್ಯೂಟರ್ ಸೈನ್ಸ್, ಕೃತಕ ಬುದ್ಧಿಮತ್ತೆ (AI), ಕ್ಲೌಡ್ ಕಂಪ್ಯೂಟಿಂಗ್ ಮತ್ತು ಬಿಗ್ ಡೇಟಾ ಸೇರಿದಂತೆ ವಿವಿಧ ಇಂಜಿನಿಯರಿಂಗ್ ಕೋರ್ಸ್‌ಗಳು ಲಭ್ಯವಿವೆ. ಜೊತೆಗೆ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್, ಮೆಕ್ಯಾಟ್ರಾನಿಕ್ಸ್ ಹಾಗೂ ಪ್ರಿಂಟಿಂಗ್ ಟೆಕ್ನಾಲಜಿ ವಿಭಾಗಗಳಲ್ಲಿಯೂ ತರಬೇತಿ ನೀಡಲಾಗುತ್ತಿದೆ.
10ನೇ ತರಗತಿ (SSLC) ಅಥವಾ ಪಿಯುಸಿ (Arts/Commerce) ಪಾಸಾದ ವಿದ್ಯಾರ್ಥಿಗಳಿಗೆ 3 ವರ್ಷಗಳ ಡಿಪ್ಲೊಮಾ ಕೋರ್ಸ್‌ಗೆ ಪ್ರವೇಶ ಅವಕಾಶವಿದೆ. 12ನೇ (Science) ಅಥವಾ ITI ಪೂರೈಸಿದವರಿಗೆ ಲೇಟರಲ್ ಎಂಟ್ರಿ ಮೂಲಕ 2ನೇ ವರ್ಷಕ್ಕೆ ನೇರ ಪ್ರವೇಶ ಕಲ್ಪಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಮಣಿಪಾಲದ ಈಶ್ವರ್ ನಗರದಲ್ಲಿರುವ ಪ್ರವೇಶ ಕಚೇರಿಯನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

















