ನೇರ ಸಂದರ್ಶನ

ಉಡುಪಿ: ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವ 3 ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಒಂದು ವರ್ಷದ ಅವಧಿಗೆ ಅಥವಾ ನೇರ ನೇಮಕಾತಿ / ವರ್ಗಾವಣೆಯಿಂದ ಭರ್ತಿಗೊಳ್ಳುವವರೆಗೆ ಅಥವಾ ಸರಕಾರದ ಮುಂದಿನ ಆದೇಶದವರೆಗೆ ನೇಮಕಾತಿ ಮಾಡುವ ಬಗ್ಗೆ ಎಂ.ಬಿ.ಬಿ.ಎಸ್ ವಿದ್ಯಾರ್ಹತೆ ಹೊಂದಿರುವ ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ನೇರ ಸಂದರ್ಶನವು ನವೆಂಬರ್ 12 ರಂದು ಬೆಳಗ್ಗೆ 11.30 ಕ್ಕೆ ಉಡುಪಿಯ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯಲಿದೆ.

ಅರ್ಹ ಅಭ್ಯರ್ಥಿಗಳು ಮೂಲ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಎಂ.ಬಿ.ಬಿ.ಎಸ್ ಎಲ್ಲಾ ವರ್ಷದ ಅಂಕಪಟ್ಟಿಗಳು, ಪದವಿ, ಕೆ.ಎಂ.ಸಿ ನೋಂದಣಿ, ಇಂಟರ್ನ್ಶಿಪ್ ಪ್ರಮಾಣ ಪತ್ರಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಶಸ್ತ್ರ ಚಿಕಿತ್ಸಕರ ಕಚೇರಿ ಪ್ರಕಟಣೆ ತಿಳಿಸಿದೆ.