ಆ.26 ರಂದು ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ

ಉಡುಪಿ: ವಿನಾಯಕ ಪ್ಲಾಸ್ಟಿಕ್ ಇಂಡಸ್ಟ್ರೀಸ್ ಪ್ರೈ.ಲಿ, ಜನಸ್ನೇಹಿ ಪ್ರೈ.ಲಿ ಮತ್ತು ಶಾಲಿಮರ್ ಪ್ರಿಂಟ್ಸ್ ಕಂಪನಿಗಳ ವತಿಯಿಂದ ಆಗಸ್ಟ್ 26 ರಂದು ಬೆಳಗ್ಗೆ 10.30 ಕ್ಕೆ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್ ಡಿಪ್ಲೋಮಾ, ಹಾಗೂ ಇತರೆ ಪದವಿ
ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ಉಡುಪಿ ಮೊ.ನಂ.8105618291, 8197440155, 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.