ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ: ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ನಮ್ಮ ಕ್ಲಿನಿಕ್‌ನಲ್ಲಿ ಖಾಲಿ ಇರುವ ವೈದ್ಯಾಧಿಕಾರಿಗಳು-2 ಹುದ್ದೆ (ನಮ್ಮ ಕ್ಲಿನಿಕ್ ಟಿ.ಟಿ ರೋಡ್ ಕುಂದಾಪುರ ಹಾಗೂ ಕಾರ್ಕಳದ ತಾಲೂಕು ಸಾರ್ವಜನಿಕ ಆಸ್ಪತ್ರೆ), ಆಡಿಯೋಮೆಟ್ರಿಕ್ ಅಸಿಸ್ಟೆಂಟ್, ಇನ್ಸ್ಟ್ರಕ್ಟರ್ ಯಂಗ್ ಹಿಯರಿಂಗ್ ಇಂಪೈರಿಡ್ ಚಿಲ್ಡ್ರನ್ (ಜಿಲ್ಲಾ ಆಸ್ಪತ್ರೆ) ಹಾಗೂ ನಗರ ಆರೋಗ್ಯ ಕೇಂದ್ರದಲ್ಲಿ ಎಲ್.ಹೆಚ್.ವಿ ತಲಾ 1 ಹುದ್ದೆ ಮತ್ತು ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಖಾಲಿ ಇರುವ ಶುಶ್ರೂಷಕರ-3 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಗೆ ಆಗಸ್ಟ್ 28 ರಂದು ಬೆಳಗ್ಗೆ 10.30 ಕ್ಕೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಶೈಕ್ಷಣಿಕ ಮೂಲ ದಾಖಲಾತಿಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕು.ಕ. ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.