ಉಡುಪಿ: ಶಾಂತಾ ಎಲೆಕ್ಟ್ರಿಕಲ್ಸ್ ಮತ್ತು ಇಂಜಿನಿರ್ಸ್ ಪ್ರೈ.ಲಿ, ಶ್ರೀ ವಿನಾಯಕ ಪ್ಲಾಸ್ಟಿಕ್ ಇಂಡಸ್ಟ್ರೀಸ್ ಕಂಪೆನಿ ಮತ್ತು ಕೋಟೆ ಮನೆ ಇಂಟರ್ ನ್ಯಾಷನಲ್ ಸ್ಕೂಲ್ ವತಿಯಿಂದ ಏಪ್ರಿಲ್ 29 ರಂದು ಬೆಳಗ್ಗೆ 9.45 ರಿಂದ ಮಣಿಪಾಲದ ಉದ್ಯೋಗ ವಿನಿಮಯ ಕಛೇರಿಯಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ, ಐ.ಟಿ.ಐ ಡಿಪ್ಲೋಮಾ, ಬಿ.ಎ, ಬಿ.ಎಡ್, ಎನ್.ಟಿ.ಟಿ ಹಾಗೂ ಇತರೆ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅಂಕಪಟ್ಟಿ, ರೆಸ್ಯೂಮ್ ಹಾಗೂ ಆಧಾರ್ ಕಾರ್ಡಿನ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಮೊ.ನಂ.9945856670, 8105618291 ಮತ್ತು 8197440155 ನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.