ಉಡುಪಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲಾ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ಹೆರಿಗೆ ತಜ್ಞರು (ಹಿರಿಯ/ ಅನುಭವವುಳ್ಳ)-2 ಹುದ್ದೆ, ಮಕ್ಕಳ ತಜ್ಞರು, ಆಡಿಯೋಲಾಜಿಸ್ಟ್ ಹಾಗೂ ಇನ್ಸ್ಟ್ರಕ್ಟರ್-ಯಂಗ್ ಹಿಯರಿಂಗ್ ಇಮ್ಪೇರ್ಡ್ ಚಿಲ್ಡ್ರನ್ ತಲಾ -1 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಜೂನ್ 19 ರಂದು ಬೆಳಗ್ಗೆ 10.30 ಕ್ಕೆ ನಗರದ ಅಜ್ಜರಕಾಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.
ಅರ್ಹ ಅಭ್ಯರ್ಥಿಗಳು ಶೈಕ್ಷಣಿಕ ಮೂಲ ದಾಖಲಾತಿಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.