ಮಂಗಳೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಖಾಸಗಿ ಕಂಪೆನಿಗಳ ನೇರ ಸಂದರ್ಶನವನ್ನು ಇದೇ ಜೂ.27ರ ಸೋಮವಾರ ಹಮ್ಮಿಕೊಳ್ಳಲಾಗಿದೆ.
ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾದ ಆಸಕ್ತ ಅಭ್ಯರ್ಥಿಗಳು ಸ್ವ ವಿವರದ ಬಯೋಡೇಟಾದೊಂದಿಗೆ ನಗರದ ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಹಮ್ಮಿಕೊಂಡಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.