ಕಾಂಗ್ರೆಸ್ ನದ್ದು ನಿರಾಶಾದಾಯಕ ಗೊಂದಲಭರಿತ ಬಜೆಟ್: ನಯನಾ ಗಣೇಶ್

ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಈ ಬಾರಿಯ ಬಜೆಟ್ ನಿರಾಶಾದಾಯಕವಾಗಿದ್ದು, ಬಿಜೆಪಿ ಸರ್ಕಾರದ ಅನೇಕ ಜನಪರ ಯೋಜನೆಗಳಿಗೆ ತಿಲಾಂಜಲಿ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಬಜೆಟ್ ನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೈ ಬಿಡುವ ಮೂಲಕ ವಿದ್ಯಾರ್ಥಿಗಳಲ್ಲಿ ಗೊಂದಲ ಮೂಡಿಸುವ ಕಾರ್ಯ ಮಾಡಿದೆ. ವಿವೇಕ ಶಾಲೆ ಅಭಿವೃದ್ಧಿ ಯೋಜನೆ ರದ್ದು, ಅಗ್ನಿವೀರ್ ತರಬೇತಿ ಯೋಜನೆ, ಸ್ವಾಮಿ ವಿವೇಕಾನಂದರ ಯುವಶಕ್ತಿ ಯೋಜನೆ, ಮಹಿಳಾ ಸ್ತ್ರೀ ಸಾಮರ್ಥ್ಯ ಯೋಜನೆ, ಮಹಿಳೆಯರ ಸ್ವಸಹಾಯ ಸಂಘದ ಸಹಾಯಧನ ಗಳಿಗೆ ಖೊಕ್ ನೀಡಿಲಾಗಿದೆ. ಈ ಮೂಲಕ ದ್ವೇಷದ ರಾಜಕಾರಣವನ್ನು ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಹೊರಟಿದೆ. ಬಿಜೆಪಿ ಸರ್ಕಾರದ ಜಿಲ್ಲೆಗೊಂದು ಗೋ ಶಾಲೆ ಯೋಜನೆಯನ್ನು ಸರ್ಕಾರ ಕೈಬಿಡುವ ಮೂಲಕ ಓಲೈಕೆಯ ರಾಜಕಾರಣ ಮಾಡಲುಮುಂದಾಗಿದ್ದು ಮುಂದಿನ ದಿನ ರಾಜ್ಯದ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದ್ದಾರೆ.