ಬೆಂಗಳೂರು: ಸರ್ಕಾರಿ ನೌಕರರು ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.
ಈ ಬಗ್ಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಸರ್ಕಾರದ ನಿಯಮದ ಏನು ಪಾಲನೆ ಇದೆಯೋ ಅದು ಪಾಲನೆಯಾಗಬೇಕು. ಗಣವೇಷ ಹಾಕಿಕೊಂಡು ಪಿಡಿಒಗಳು, ಆರೋಗ್ಯ ಅಧಿಕಾರಿಗಳು ಓಡಾಡುತ್ತಿದ್ದು ಅವರನ್ನು ಅಮಾನತು ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಆರ್‌ಎಸ್‌ಎಸ್ ಆಗಲಿ, ತಾಲಿಬಾನಿ ಆಗಲಿ ಯಾರಿಗೂ ಶಾಲೆಗಳಲ್ಲಿ ಅವಕಾಶ ಕೊಡಬಾರದು. ಶಾಲೆಗಳಲ್ಲಿ ಕೋಮು ವಿಷಬೀಜ ಬಿತ್ತಲು ನಾವು ಬಿಡುವುದಿಲ್ಲ ಎಂದು ಹೇಳಿದರು.


















