ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರವು ಏಪ್ರಿಲ್ 8 ರಿಂದ 13 ರ ವರೆಗೆ ಧಾರವಾಡ ಕರ್ನಾಟಕ ಕಾಲೇಜು ಆವರಣದಲ್ಲಿ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳವನ್ನು ಏರ್ಪಡಿಸಲಾಗುತ್ತಿದ್ದು, ಪುಸ್ತಕ ಮೇಳದಲ್ಲಿ ಭಾಗವಹಿಸಲು ಕನ್ನಡ ಪ್ರಕಾಶಕರು ಹಾಗೂ ಮಾರಾಟಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಏಪ್ರಿಲ್ 6 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ದೂ.ಸಂಖ್ಯೆ: 080-22484516/22107704 ಅಥವಾ ಪ್ರಾಧಿಕಾರದ ವೆಬ್‌ಸೈಟ್ www.kannadapustakapradhikara.com ಅಥವಾ ಜಿಲ್ಲೆಯ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಯನ್ನು ಸಂಪರ್ಕಿಸುವಂತೆ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.