ಅಶಿಸ್ತಿನಿಂದ ವರ್ತಿಸಿ ಸ್ಪೀಕರ್ ಪೀಠಕ್ಕೆ ಅಗೌರವ: ಬಿಜೆಪಿಯ 10 ಶಾಸಕರ ಅಮಾನತು

ಬೆಂಗಳೂರು: ವಿಧಾನಸಭಾ ಕಲಾಪದ ವೇಳೆ ಅಶಿಸ್ತಿನಿಂದ ವರ್ತಿಸಿದ ಕಾರಣ ಯು.ಟಿ.ಖಾದರ್ ಅವರು ೧೦ ಶಾಸಕರ ಅಮಾನತು ಮಾಡಿದ್ದಾರೆ . ಸ್ಪೀಕರ್ ಪೀಠ ಮತ್ತು ಸದನಕ್ಕೆ ಅಗೌರವ ತೋರಿದ ಆರೋಪದ ಮೇಲೆ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಈ ವಿಧಾನಸಭಾ ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಲಾಗಿದೆ. ಬಿಜೆಪಿ ಶಾಸಕರಾದ ಉಮಾನಾಥ ಕೋಟ್ಯಾನ್, ಯಶ್ ಪಾಲ್ ಸುವರ್ಣ,ವೇದವ್ಯಾಸ ಕಾಮತ್, ವಿ.ಸುನಿಲ್ ಕುಮಾರ್,ಆರ್.ಅಶೋಕ್, ಆರಗ ಜ್ಞಾನೇಂದ್ರ, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಭರತ್ ಶೆಟ್ಟಿ, ಡಾ. ಅಶ್ವತ್ಥ ನಾರಾಯಣ ಇವರೆಲ್ಲರನ್ನು ಅಮಾನತು ಮಾಡಿದ್ದಾರೆ . ಅಷ್ಟಲ್ಲದೇ ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್ ಸದಸ್ಯರು ಸ್ಪೀಕರ್​ಗೆ ದೂರು ನೀಡಿದ್ದರು.ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ ಬಿಜೆಪಿ ಶಾಸಕರು ಬಜೆಟ್ ಪ್ರತಿಗಳ ಕಾಗದಗಳನ್ನು ಹರಿದು ಚೂರು ಮಾಡಿ ಉಪ ಸಭಾಪತಿಯಾದ ರುದ್ರಪ್ಪ ಲಮಾಣಿ ಅವರ ಮೇಲೆ ಎಸೆದ ಹಿನ್ನೆಲೆ ಸದನದಲ್ಲಿ ಭಾರಿ ಗದ್ದಲ ಸೃಷ್ಟಿಯಾಗಿತ್ತು