ನ. 29 ರಂದು ಜಿಲ್ಲಾ ವ್ಯಾಪ್ತಿಯ ವಿವಿಧೆಡೆಗಳಲ್ಲಿ ವಿದ್ಯುತ್ ವ್ಯತ್ಯಯ

ಉಡುಪಿ:ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ನವೆಂಬರ್ 29 ರಂದು ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

33/11ಕೆವಿ ಕುಂಜಿಬೆಟ್ಟು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಉಡುಪಿ-1, ಸಿಟಿ ಸೆಂಟರ್, ಉಡುಪಿ-2, ಉಡುಪಿ-3 ಮತ್ತು ಚಿಟ್ಪಾಡಿ ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಉಡುಪಿ ನಗರ ಪ್ರದೇಶಗಳಾದ ಬಡಗುಪೇಟೆ, ಸಿಟಿ ಬಸ್ಸು ನಿಲ್ದಾಣ ಏರಿಯಾ, ಕಡಿಯಾಳಿ, ಎಂ.ಜಿ.ಎಂ ಎದುರು, ಸಿಟಿ ಸೆಂಟರ್ ಮಾಲ್, ಕಿನ್ನಿಮುಲ್ಕಿ, ಮಿಷನ್ ಕಂಪೌಂಡ್, ಅಜ್ಜರಕಾಡು,
ಚಂದು ಮೈದಾನ, ಕೋರ್ಟ್ ರಸ್ತೆ, ತೆಂಪೇಟೆ, ಕೆ.ಎಂ.ಮಾರ್ಗ, ಮಾರುತಿ ವಿಥೀಕಾ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಇಂದಿರಾನಗರ, ಕಸ್ತೂರ್ಬಾ ನಗರ, ಕುಕ್ಕಿಕಟ್ಟೆ, ಬೈಲೂರು, ಹನುಮಾನ್ ಗ್ಯಾರೇಜ್, ಚಿಟ್ಪಾಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

110/33/11 ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಮೂಡುಬೆಳ್ಳೆ, ಉದ್ಯಾವರ-2 ಮತ್ತು ಕೆ.ಎಂ.ಎಫ್ ಫೀಡರಿನಲ್ಲಿ ಮೆಂಟೆನೆನ್ಸ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಣಿಪುರ, ಮೂಡುಬೆಳ್ಳೆ, ಮರ್ಣೆ, ಕಟ್ಟಿಂಗೇರಿ, ಕೆಮ್ತೂರು, ಕೊರಂಗ್ರಪಾಡಿ, ಮಾರ್ಪಳ್ಳಿ, ಕುಕ್ಕಿಕಟ್ಟೆ, ಉದ್ಯಾವರ-2, ಕಟಪಾಡಿ, ಈಶ್ವರನಗರ, ಸರಳೇಬೆಟ್ಟು, ಅರ್ಬಿ, ಪ್ರಗತಿನಗರ, 80 ಬಡಗುಬೆಟ್ಟು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

110/11ಕೆವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಉಪ್ಪೂರು, ಹೊನ್ನಾಳ, ಚೇರ್ಕಾಡಿ, 110/11ಕೆವಿ ನಿಟ್ಟೂರು ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಕಲ್ಯಾಣಪುರ ಫೀಡರಿನಲ್ಲಿ ಹಾಗೂ 220/110/11ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರ ಹೆಗ್ಗುಂಜೆ ಉಪಕೇಂದ್ರದಿಂದ ಹೊರಡುವ 11ಕೆವಿ ಹೆಗ್ಗುಂಜೆ ಮತ್ತು ನಂಚಾರು ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕಾರಣದಿಂದ ಉಪ್ಪೂರು, ಮಾಯಾಡಿ, ಸಾಲ್ಮರ, ಕುದ್ರುಬೆಟ್ಟು, ಕೆ.ಜಿ ರೋಡ್, ಕೋಟೆ ರೋಡ್, ನಿಡಂಬಳ್ಳಿ, ಕಲ್ಯಾಣಪುರ, ಆದರ್ಶನಗರ, ಕೀರ್ತಿನಗರ, ಸಾಲಿಕೇರಿ, ಬಿರ್ತಿ, ಹೊನ್ನಾಳ, ಕುಕ್ಕುಡೆ, ಹೇರೂರು, ಚಾಂತಾರು, ಕುಂಜಾಲು, ಆರೂರು, ಚೇರ್ಕಾಡಿ,
ಹಲುವಳ್ಳಿ, ಸಂತೆಕಟ್ಟೆ, ನೇಜಾರು, ಮೂಡುತೋನ್ಸೆ, ಕೋಡಿಬೆಂಗ್ರೆ, ಹೆಗ್ಗುಂಜೆ, ಕಾಡೂರು, ಪೆಜಮಂಗೂರು, ಕೊಕ್ಕರ್ಣೆ, ಕೆಂಜೂರು, ಶಿರೂರು, ಹಿಲಿಯಾಣ, ನಂಚಾರು, ಮುದ್ದೂರು, ಕಜ್ಕೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.

110ಕೆವಿ ಕಾರ್ಕಳ ವಿದ್ಯುತ್ ಉಪಕೇಂದ್ರದಿಂದ 11ಕೆವಿ ಮುಂಡ್ಲಿ, ಬಂಡೀಮಠ, ನಕ್ರೆ, ಪದವು ಮತ್ತು ಜಾರ್ಕಳ ಲೈನಿನ ನಿರ್ವಹಣೆ ಕಾರ್ಯ ಕೈಗೊಂಡಿರುವುದರಿಂದ ಸದರಿ 110ಕೆವಿ ಕಾರ್ಕಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಮುಂಡ್ಲಿ, ಬಂಡೀಮಠ, ನಕ್ರೆ, ಪದವು ಮತ್ತು ಜಾರ್ಕಳ ಫೀಡರ್‌ಗಳ ಮುಂಡ್ಲಿ, ತೆಳ್ಳಾರು, ಪಲಾಯಿಪಕ್ಯಾರು, ಕಜೆ, ಪೊಲ್ಲಾರು, ಉದ್ದಪಲ್ಕೆ, ಬಂಗ್ಲೆಗುಡ್ಡೆ, ಬಂಡಿಮಠ, ಕಲ್ಲೊಟ್ಟೆ, ಪೆರ್ವಾಜೆ, ಪರಪು, ಗುಂಡ್ಯಡ್ಕ, ಬೋರ್ಗಲ್ ಗುಡ್ಡೆ, ಕುಂಟಾಡಿ, ಪಳ್ಳಿ, ಆನಂದಿ ಮೈದಾನ, ನಕ್ರೆ, ಪೊಸನೊಟ್ಟು, ಕುಕ್ಕುಂದೂರು, ಅಯ್ಯಪ್ಪನಗರ, ಪಿಲಿಚಂಡಿಸ್ಥಾನ, ಗಣಿತನಗರ, ಜಾರ್ಕಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ
ಬೆಳಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

110/11 ಕೆ.ವಿ ಹಾಲಾಡಿ ವಿದ್ಯುತ್ ಉಪಕೇಂದ್ರದಲ್ಲಿ 110 ಕೆವಿ ಬಸ್ ಬಾರ್ ಮತ್ತು ಸಂಬಂಧಿಸಿದ ಉಪಕರಣಗಳ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸದ್ರಿ ಉಪಕೇಂದ್ರದಿಂದ ಹೊರಡುವ 11ಕೆ.ವಿ ಶಂಕರನಾರಾಯಣ, ಆವರ್ಸೆ, ಬಿದ್ಕಲ್ಕಟ್ಟೆ, ಬೈಲೂರು, ಬೆಳ್ವೆ, ಹೈಕಾಡಿ, ವಾರಾಹಿ ಮತ್ತು ಕೆ.ಎನ್.ಎನ್.ಎಲ್ ಹಾಲಾಡಿ ಮಾರ್ಗಗಳಲ್ಲಿ ಅಮಾಸೆಬೈಲು, ಕುಳುಂಜೆ, ಶಂಕರನಾರಾಯಣ, ಹಾಲಾಡಿ-26, ಮಚ್ಚಟ್ಟು, ರಟ್ಟಾಡಿ, ತೊಂಬಟ್ಟು, ಕೆಳಸುಂಕ, ಜಡ್ಡಿನಗದ್ದೆ, ಹಾಲಾಡಿ, ಬಿದ್ಕಲ್ಕಟ್ಟೆ, ಗಾವಳಿ,
ಹಾಲಾಡಿ-28, ಮಡಾಮಕ್ಕಿ, ಹಾಲಾಡಿ-76, ಸಿದ್ದಾಪುರ, ಉಳ್ಳೂರು-74, ಕಕ್ಕುಂಜೆ, ಹೆಸ್ಕತ್ತೂರು, ಯಡಾಡಿ-ಮತ್ಯಾಡಿ, ಹಳ್ಳಾಡಿ- ಹರ್ಕಾಡಿ, ಹಾರ್ದಳ್ಳಿ-ಮಂಡಳ್ಳಿ, ಮೊಳಹಳ್ಳಿ, ಬೈಲೂರು, ಕೊಂಡಳ್ಳಿ, ಬೆದ್ರಾಡಿ, ಕೋಣಿಹರ, ಬೆಳ್ವೆ, ಅಲ್ಬಾಡಿ, ಆರ್ಡಿ, ಹೆಂಗವಳ್ಳಿ, ಸೂರ್ಗೋಳಿ, ಶೇಡಿಮನೆ, ಹೈಕಾಡಿ ಮತ್ತು ಗೋಳಿಯಂಗಡಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಮಾಡಲಾಗುತ್ತದೆ.

220/110/11ಕೆವಿ ಕೇಮಾರ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಫೀಡರ್‌ಗಳಾದ ನಿಟ್ಟೆ, ಕಲ್ಯಾ, ಲೆಮಿನಾ, ನಿಟ್ಟೆ ವಾಟರ್ ಸಪ್ಲೈ, 110ಕೆವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ 11ಕೆವಿ ಪದವು ಫೀಡರ್ ಹಾಗೂ 110 ಕೆವಿ ಬೆಳ್ಮಣ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಫೀಡರ್ ಗಳಾದ ಮುಂಡ್ಕೂರು, ನಂದಳಿಕೆ, ಬೋಳ ಮತ್ತು ಬೆಳ್ಮಣ್ ಫೀಡರ್ ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕಾರಣದಿಂದ ಸದರಿ ಫೀಡರ್‌ಗಳಲ್ಲಿ ನಿಟ್ಟೆ, ನಿಟ್ಟೆ ಕಾಲೇಜು, ನಿಟ್ಟೆ ವಾಟರ್ ಸಪ್ಲೈ, ಬೊರ್ಗಲ್ ಗುಡ್ಡೆ, ಹಾಮಾಜೆ, ಕುಂಟಾಡಿ, ಕೈರಬೆಟ್ಟು, ನಿಟ್ಟೆ ಪಂಚಾಯತ್, ನಿಟ್ಟೆ ಮಸೀದಿ, ಲೆಮಿನಾ ಇಂಡಸ್ಟ್ರಿಸ್, ದೂಪದಕಟ್ಟೆ, ಕೆಮ್ಮಣ್ಣು,
ಗುಂಡ್ಯಡ್ಕ, ಕಲ್ಲಂಬಾಡಿ, ಪದವು, ನೆಲ್ಲಿಗುಡ್ಡೆ, ಬಾರಾಡಿ, ಬೇಲಾಡಿ, ಕಾಂತಾವರ, ಕಲ್ಯಾ, ಬೆಳ್ಮಣ್, ಬೆಳ್ಮಣ್ ದೇವಸ್ಥಾನ, ಗೋಳಿಕಟ್ಟೆ, ನಂದಳಿಕೆ, ಜಂತ್ರ, ನೀಚಾಲು, ಕೆದಿಂಜೆ, ಅಂಬರಾಡಿ, ಬೋಳ ಪಂಚಾಯತ್, ಪಿಲಿಯೂರು, ಕೆರೆಕೋಡಿ, ಒಂಜರ್ ಕಟ್ಟೆ, ಬಾರೆಬೈಲು, ಪುಕ್ಕಲ್ಲು, ಕೆಂಪುಜೋರ, ಮಾವಿನಕಟ್ಟೆ, ದೇಂದೊಟ್ಟು ಪದವು, ಇಟ್ಟಮೇರಿ, ಕೊರಜೆ, ಮುಂಡ್ಕೂರು, ಕಾಂಜರಕಟ್ಟೆ, ಸಚ್ಚರಿಪೇಟೆ, ಮುಲ್ಲಡ್ಕ, ಕೋಡಿಮಾರು, ಸಂಕಲಕರಿಯ, ನಾನಿಲ್ ತಾರ್, ಜಾರಿಗೆಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಂಬಂಧಪಟ್ಟ ಗ್ರಾಹಕರು ಮೆಸ್ಕಾಂನೊಂದಿಗೆ
ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.