ಮಾರ್ಚ್ 25-27 ನೀರು ಸರಬರಾಜಿನಲ್ಲಿ ವ್ಯತ್ಯಯ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಪೂರೈಕೆ ಮಾಡುವ ಸ್ವರ್ಣಾ ನದಿಯ ಬಜೆ ಪಂಪ್‌ಹೌಸ್‌ನಲ್ಲಿ ಕೆ.ಯು.ಐ.ಡಿ.ಎಫ್.ಸಿ ವತಿಯಿಂದ ದುರಸ್ಥಿ ಕಾರ್ಯ ಕೈಗೊಳ್ಳಲಾಗುವುದರಿಂದ ಮಾರ್ಚ್ 25 ರಂದು ಬೆಳಗ್ಗೆ 9 ಗಂಟೆಯಿಂದ ಮಾ. 26 ರ ಬೆಳಗ್ಗೆ 9 ಗಂಟೆಯವರೆಗೆ ಉಡುಪಿ ನಗರಕ್ಕೆ ನೀರು ಸರಬರಾಜು ಇರುವುದಿಲ್ಲ ಹಾಗೂ ಉಡುಪಿ ನಗರಸಭಾ ವ್ಯಾಪ್ತಿಯ ವಿವಿಧ ವಾರ್ಡ್ಗಳಲ್ಲಿನ ಎತ್ತರದ ಪ್ರದೇಶಗಳಿಗೆ ಮಾ. 26 ಮತ್ತು 27 ರಂದು ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.