ಅಲ್ಪಸಂಖ್ಯಾತ ವಿದ್ಯಾರ್ಥಿಗಳ ದೂರಶಿಕ್ಷಣ ಪ್ರವೇಶಾತಿ: ಅರ್ಜಿ ಸಲ್ಲಿಕೆ – ಅವಧಿ ವಿಸ್ತರಣೆ

ಉಡುಪಿ: ಪದವಿ ಶಿಕ್ಷಣದಿಂದ ವಂಚಿತರಾಗಿರುವ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಂದ ಪ್ರಸಕ್ತ ಶೈಕ್ಷಣಿಕ ಸಾಲಿಗೆ ಸಂಬoಧಿಸಿದoತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿಯಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್ಗಳ ಪ್ರವೇಶಾತಿಗೆ ವೆಬ್‌ಸೈಟ್ https://minority.ksouportal.comನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 10 ರ ವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://dom.karnataka.gov.in ಅಥವಾ ಸಹಾಯವಾಣಿ ಸಂ: 9900667916, 9113512565, 9611418726, 9900509959, 9035395137 ಹಾಗೂ 9900509959 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ದೂ.ಸಂಖ್ಯೆ: 0820-2574596 ಅಥವಾ ಕಾರ್ಕಳ ದೂ.ಸಂಖ್ಯೆ: 08258-231101 ಮತ್ತು ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.