ಉನ್ನತಿ ಕೆರಿಯರ್ ಅಕಾಡೆಮಿ: ಬ್ಯಾಂಕಿಂಗ್ ಫೈನಾಶಿಯಲ್ ತರಬೇತಿ ಪ್ರಮಾಣಪತ್ರ ವಿತರಣೆ ಹಾಗೂ ಸಂವಾದ ಕಾರ್ಯಕ್ರಮ

ಉಡುಪಿ: ಕೌಶಲ್ಯ ಶಿಕ್ಷಣಕ್ಕೆ ಪ್ರಸಿದ್ದಿ ಪಡೆದಿರುವ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ತರಬೇತಿ ಪಾಲುದಾರ ಸಂಸ್ಥೆಯಾದ ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿಯು ಉಡುಪಿ ಜಿಲ್ಲೆಯ ಆಯ್ದ 60 ಅಭ್ಯರ್ಥಿಗಳಿಗೆ ಬ್ಯಾಂಕಿಂಗ್ ಮತ್ತು ಫೈನಾನ್ಶಿಯಲ್ ಕ್ಷೇತ್ರದ ಪ್ರಮುಖ ವಿಷಯಗಳಾದ ಕೆವೈಸಿ-ಎಎಂಎಲ್, ಕಸ್ಟಮರ್ ಸರ್ವೀಸ್, ಡಿಜಿಟಲ್ ಬ್ಯಾಂಕಿಂಗ್ ನಲ್ಲಿ ತರಬೇತಿ ನೀಡಿದ್ದು, ಇಂದು ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಉಡುಪಿ ಇಂಡಸ್ ಇಂಡ್ ಬ್ಯಾಂಕ್ ನ ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್ ಮತ್ತು ಬ್ರಾಂಚ್ ಮ್ಯಾನೇಜರ್ ನಿತಿನ್ ರವರು ಭಾಗವಹಿಸಿ, ಅಭ್ಯರ್ಥಿಗಳೊಂದಿಗೆ ಸಂವಾದ ನಡೆಸಿದರು.

ಬ್ಯಾಂಕಿಂಗ್ ಕ್ಷೇತ್ರದಲ್ಲಿನ ವಿವಿಧ ಉದ್ಯೋಗಾವಕಾಶಗಳು ಹಾಗೂ ತಮ್ಮ 9 ವರ್ಷಗಳ ಬ್ಯಾಂಕಿಂಗ್ ಅನುಭವವನ್ನು ಹಂಚಿಕೊಂಡ ಅವರು, ಉನ್ನತಿ ಸಂಸ್ಥೆ ಈ ತರಬೇತಿ ನಿಜಕ್ಕೂ ಒಂದು ಉತ್ತಮ ಪ್ರಯತ್ನ. ಈ ಸಂಸ್ಥೆಯಿಂದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಹೊಸ ಪ್ರತಿಭೆಗಳಿಗೆ ಅವಕಾಶ ದೊರಕಲಿದೆ. ಕೆವೈಸಿ-ಎಎಂಎಲ್, ಕಸ್ಟಮರ್ ಸರ್ವೀಸ್, ಡಿಜಿಟಲ್ ಬ್ಯಾಂಕಿಂಗ್ ಕ್ಷೇತ್ರಗಳಲ್ಲಿ ಇದೀಗ ನೂರಾರು ಉದ್ಯೋಗಾವಕಾಶಗಳಿವೆ ಎಂದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಸ್ಥಾಪಕ ಪ್ರೇಮ್ ಪ್ರಸಾದ್ ಶೆಟ್ಟಿ, ನಿರ್ದೇಶಕಿ ಪೌರ್ಣಮಿ ಪ್ರೇಮ್ ಶೆಟ್ಟಿ, ಪರೀಕ್ಷಿತ್ ಹೆಗ್ಡೆ, ರಾಜೇಶ್, ನೀತಿಕ ಉಪಸ್ಥಿತರಿದ್ದರು. ಉಮೇಶ್ ನಾಯಕ್ ನಿರೂಪಿಸಿ, ಪ್ರೀತಿ ವಂದಿಸಿದರು.