ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಮತ್ತು ವಿವಿಧ ಅಭಿವೃದ್ಧಿ ನಿಗಮಗಳು ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ನಿಗಮಗಳ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಹಾಗೂ ಪೌರಕಾರ್ಮಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮವು ಫೆಬ್ರವರಿ 27 ರಂದು ಬೆಳಗ್ಗೆ 10 ಗಂಟೆಗೆ ನಗರದ ಕಿದಿಯೂರು ಹೋಟೆಲ್‌ನ ಮಾಧವಕೃಷ್ಣ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದು, ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.