ಉಡುಪಿ ನಿಟ್ಟೂರು ಪ್ರೌಢಶಾಲೆಯ 14 ವಿದ್ಯಾರ್ಥಿಗಳಿಗೆ ಶನಿವಾರ ಉಚಿತ ಎಲ್ ಪಿಜಿ ಗ್ಯಾಸ್ ವಿತರಿಸಲಾಯಿತು. ಕಳೆದ ಏಳು ವರ್ಷಗಳಲ್ಲಿ ಶಾಲೆಯ 80 ವಿದ್ಯಾರ್ಥಿಗಳಿಗೆ ಉಚಿತ ಅಡುಗೆ ಅನಿಲ ಸಂಪರ್ಕ ಕಲ್ಪಿಸಲಾಗಿದೆ.
ಶಾಲೆಯ ಹಳೆ ವಿದ್ಯಾರ್ಥಿ, ದಾನಿ ಅನಂತ ಭಟ್ ಮಡಾಮಕ್ಕಿ ವಿದ್ಯಾರ್ಥಿಗಳಿಗೆ ಉಚಿತ ಎಲ್.ಪಿ.ಜಿ ಗ್ಯಾಸ್ ವಿತರಿಸಿದರು.
ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಮುರಳಿ ಕಡೆಕಾರ್ ಪ್ರಾಸ್ತಾವಿಕ ಮಾತನಾಡಿದರು.
ಉಡುಪಿ ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ| ಹರಿಶ್ಚಂದ್ರ, ನಿವೃತ್ತ ಮುಖ್ಯೋಪಾಧ್ಯಾಯ ಎಸ್. ವಿ. ಭಟ್, ಜಾಹ್ನವಿ ಅನಂತ ಭಟ್, ಪುತ್ರ ಆಶ್ರಯ ಭಟ್, ಹಳೆವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ದಿನೇಶ್ ಪಿ. ಪೂಜಾರಿ, ಕಾರ್ಯದರ್ಶಿ ಪ್ರದೀಪ್ ಜೋಗಿ, ನಿವೃತ್ತ ಮುಖ್ಯೋಪಾಧ್ಯಾಯ ಕೆ.ಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ಅನಸೂಯ ಸ್ವಾಗತಿಸಿದರು. ಹಿರಿಯ ಶಿಕ್ಷಕರಾದ ಎಚ್. ಎನ್. ಶೃಂಗೇಶ್ವರ ಕಾರ್ಯಕ್ರಮ ನಿರೂಪಿಸಿದರು.