ಉಡುಪಿ: ಪೂರ್ವ ಸ್ವಾಮ್ಯದ ವಾಹನ ವಿತರಕರ ಸಂಘದ ವತಿಯಿಂದ ಜೂನ್ 15 ರಂದು ಬೆಳಿಗ್ಗೆ 10 ಗಂಟೆಗೆ ಉಡುಪಿಯ ಭುಜಂಗ ಪಾರ್ಕಿನಲ್ಲಿ 1000 ಕ್ಕೂ ಮಿಕ್ಕಿ ಔಷಧೀಯ ಸಸ್ಯಗಳ ಉಚಿತ ವಿತರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ನಗರಸಭೆಯ ಪೌರಾಯುಕ್ತ ರಮೇಶ್ ಪಿ ನಾಯ್ಕ್ ವಹಿಸಿಕೊಳ್ಲಲಿದ್ದು, ಪೂರ್ವ ಸ್ವಾಮ್ಯದ ವಾಹನ ವಿತರಕರ ಸಂಘದ ಅಧ್ಯಕ್ಷ ಮೊಹಮ್ಮದ್ ಅಶ್ರಫ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಆರ್.ಟಿ.ಓ ಸಾರಿಗೆ ಅಧಿಕಾರಿ ರವಿ ಶಂಕರ್ ಪಿ, ವಲಯ ಅರಣ್ಯಾಧಿಕಾರಿ ಸುಬ್ರಮಣ್ಯ ಆಚಾರ್ಯ, ಪ್ರಖ್ಯಾತ ವೈದ್ಯ ಡಾ. ಮನೋಹರ್ ಬೋಳಾರ್ ಮತ್ತು ಖ್ಯಾತ ಸಮಾಜ ಸೇವಕ ರಾಘವೆಂದ್ರ ಪ್ರಭು ಕರ್ವಾಲ್ ವಹಿಸಿಕೊಳ್ಳಲಿದ್ದಾರೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಆಯೋಜಕ ಮೊಹಮ್ಮದ್ ಅಶ್ರಫ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.