ತಲ್ಲೂರು ಫ್ಯಾಮಿಲಿ ಟ್ರಸ್ಟ್ ವತಿಯಿಂದ ವಿಶೇಷ ಮಕ್ಕಳ ಶಾಲೆಯಲ್ಲಿ ಮಣಿಪಾಲ ಆರೋಗ್ಯ ಕಾರ್ಡ್ ವಿತರಣೆ

ಉಡುಪಿ: ತಲ್ಲೂರು ಫ್ಯಾಮಿಲಿ ಟ್ರಸ್ಟ್ ವತಿಯಿಂದ ನಡೆಸಲಾಗುತ್ತಿರುವ ಮಣಿಪಾಲ ಆರೋಗ್ಯ ಕಾರ್ಡ್ ನ ವಿತರಣಾ ಕಾರ್ಯಕ್ರಮವು ಡಿ.19 ರಂದು ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮಣಿಪಾಲ ಆರೋಗ್ಯ ಕಾರ್ಡ್ ನ ಮಾರ್ಕೆಟಿಂಗ್ ಡಿಪಾರ್ಟ್ ಮೆಂಟ್ ನ ಸಿಬ್ಬಂದಿಗಳಾದ ಅನಿಲ್, ಮೋಹನ್ ಹಾಗೂ ಶ್ರೀ ಅಕ್ಷಯ್, ಮಣಿಪಾಲ್ ಆರೋಗ್ಯ ಕಾರ್ಡ್ ನ ಪ್ರತಿನಿಧಿ ರಕ್ಷಿತ್ ಕುಮಾರ್ ಶೆಟ್ಟಿ ಹಾಗೂ ತಲ್ಲೂರು ಫ್ಯಾಮಿಲಿ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಸುರೇಶ್. ಟಿ ಉಪಸ್ಥಿತರಿದ್ದರು.

ಮಾರ್ಕೆಟಿಂಗ್ ವಿಭಾಗದ ಮೋಹನ್ ಮಾತನಾಡಿ, ವಿಶೇಷ ಮಕ್ಕಳ ಪಾಲನೆಯಲ್ಲಿ ತೊಡಗಿರುವ ಶಿಕ್ಷಕರ ಸೇವೆಯನ್ನು ಶ್ಲಾಘಿಸಿದರು ಮತ್ತು ಆರೋಗ್ಯ ಕಾರ್ಡ್ ನ ಬಗ್ಗೆ ಮಾಹಿತಿ ನೀಡಿ ಆರೋಗ್ಯ ಸೇವೆಗೆ ಸಂಬಂಧಪಟ್ಟಂತೆ ತಲ್ಲೂರು ಶಾಲೆಯೊಂದಿಗೆ ಸದಾ ಜೊತೆಯಾಗಿದ್ದೇವೆ ಎಂದು ತಿಳಿಸಿದರು.

ಕಳೆದ ಮೂರು ವರ್ಷಗಳಿಂದ ವಿಶೇಷ ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಉಚಿತವಾಗಿ ಮಣಿಪಾಲ್ ಹೆಲ್ತ್ ಕಾರ್ಡನ್ನು ವಿತರಿಸುತ್ತಿರುವ ಸಿಬ್ಬಂದಿಗಳಿಗೆ ಸಂಸ್ಥೆಯ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.

ಶಿಕ್ಷಕಿಯರಾದ ಶ್ರುತಿ ಸ್ವಾಗತಿಸಿ, ಪ್ರತಿಮಾ ವಂದಿಸಿ, ಶಿಕ್ಷಕಿದೀಪಾ ಕಾರ್ಯಕ್ರಮ ನಿರೂಪಿಸಿದರು.