ಉಡುಪಿ: ಜೂನ್ 15 ರಂದು ಪೂರ್ವ ಸ್ವಾಮ್ಯದ ವಾಹನ ವಿತರಕರ ಸಂಘದ ವತಿಯಿಂದ ಔಷಧೀಯ ಸಸ್ಯಗಳ ವಿತರಣೆ

ಉಡುಪಿ: ಕ್ಯಾನ್ಸರ್ ಕಾಯಿಲೆಯ ಚಿಕಿತ್ಸೆಯಲ್ಲಿ ಪರಿಣಾಮಕಾರಿ ಎನ್ನಲಾದ ಔಷಧೀಯ ಗುಣವುಳ್ಳ ಲಕ್ಷಣ ಫಲ ಹಾಗೂ ಇನ್ನಿತರ ಔಷಧೀಯ ಸಸ್ಯಗಳನ್ನು ಇಲ್ಲಿನ ಪೂರ್ವ ಸ್ವಾಮ್ಯದ ವಾಹನ ವಿತರಕರ ಸಂಘದ ವತಿಯಿಂದ ಜೂನ್ 15 ಗುರುವಾರದಂದು ಬೆಳಿಗ್ಗೆ 10 ಗಂಟೆಗೆ ಭುಜಂಗ ಪಾರ್ಕಿನಲ್ಲಿ ಉಚಿತವಾಗಿ ನೀಡಲಾಗುತ್ತಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಂಘದ ಅಧ್ಯಕ್ಷರು ತಿಳಿಸಿದ್ದಾರೆ.