ಉಡುಪಿ: ಉಡುಪಿ ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಿಸುಗಳ ತಯಾರಕರ ಮತ್ತು ಮಾರಾಟಗಾರರ ಸಂಘದ ವತಿಯಿಂದ 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು. ಆಗಸ್ಟ್ 15 ರಂದು ಬೆಳಿಗ್ಗೆ 9:00 ಗಂಟೆಗೆ ಆಕಾಶವಾಣಿ ಸರ್ಕಲ್ ಬಳಿಯ ಕೃಷ್ಣಗಿರಿ ಕಾಂಪ್ಲೆಕ್ಸ್ ಮುಂಭಾಗದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸಂಘದ ಅಧ್ಯಕ್ಷ ವಿಶ್ವನಾಥ್ ಕುಲಾಲ್ ಧ್ವಜಾರೋಹಣ ನಡೆಸಿದರು. ಆ ಬಳಿಕ ಧ್ವಜ ವಂದನೆ ಮಾಡಿ ರಾಷ್ಟ್ರಗೀತೆಯನ್ನು ಹಾಡಲಾಯಿತು.
ಸಂಘದ ಕಾನೂನು ಸಲಹೆಗಾರರಾದ ಶ್ರೀಧರ್ ಪಿ.ಎಸ್ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಾಣತ್ಯಾಗ ಮಾಡಿದ ನಾಯಕರನ್ನು ಸ್ಮರಿಸಿ ಸ್ವಾತಂತ್ರ್ಯಾ ನಂತರ 75 ವರ್ಷಗಳಲ್ಲಿ ದೇಶ ಬೆಳೆದು ಬಂದ ಬಗೆಯನ್ನು ವಿವರಿಸಿದರು.
ಸಂಘದ ಉಪಾಧ್ಯಕ್ಷ ಕೆ.ಪಿ ಶ್ರೀಷನ್ ವಂದಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಸತ್ಯಪ್ರಸಾದ್ ಶೆಣೈ ನಿರೂಪಿಸಿದರು.