ಉಡುಪಿ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಯಶ್ಪಾಲ್ ಸುವರ್ಣ ಅವರಿಗೆ ಬಿಜೆಪಿ ಉಡುಪಿ ಜಿಲ್ಲಾ ಕಚೇರಿಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಬುಧವಾರ ಪಕ್ಷದ ಶಾಲು ಹೊದಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಬಿಜೆಪಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸಲೀಂ ಅಂಬಾಗಿಲು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರ್ರಾಡಿ, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್ ಕುಂಜಿಬೆಟ್ಟು, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಮಾಧ್ಯಮ ಪ್ರಕೋಷ್ಠ ಸಂಚಾಲಕ ಶ್ರೀನಿಧಿ ಹೆಗ್ಡೆ ಆತ್ರಾಡಿ, ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕ ಚಂದ್ರಶೇಖರ ಪ್ರಭು, ಜಿಲ್ಲಾ ಅಭಿವೃದ್ಧಿ ಮಾಹಿತಿ ಪ್ರಕೋಷ್ಠದ ಸಂಚಾಲಕ ವಿನೋದ್ ನಾಯಕ್, ಬಿಜೆಪಿ ಉಡುಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ್ ಉಪಸ್ಥಿತರಿದ್ದರು.