ಉಡುಪಿ: ಕೇಂದ್ರ ಸರಕಾರದಿಂದ ಉಡುಪಿ ಜಿಲ್ಲೆಗೆ 100 ಬೆಡ್ ಗಳ ಇ.ಎಸ್.ಐ ಆಸ್ಪತೆ ಮಂಜೂರಾಗಿದ್ದು, ಜಿಲ್ಲೆಯ ಜನತೆಯ ಬಹುಕಾಲದ ಬೇಡಿಕೆ ನನಸಾಗಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹರ್ಷ ವ್ಯಕ್ತಪಡಿದ್ದಾರೆ.
ಜನತೆಯ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಕೇಂದ್ರ ಕಾರ್ಮಿಕ ಸಚಿವರಾದ ಶ್ರೀ ಭೂಪೇಂದ್ರ ಯಾದವ್ ಹಾಗೂ ಉಡುಪಿ ಜಿಲ್ಲೆಗೆ ಆಸ್ಪತ್ರೆ ಮಂಜೂರು ಮಾಡುವಲ್ಲಿ ವಿಶೇಷ ಮುತುವರ್ಜಿ ವಹಿಸಿ ಯಶಸ್ವಿಯಾದ ಉಡುಪಿ-ಚಿಕ್ಕಮಗಳೂರು ಸಂಸದೆ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆಯವರಾದ ಶೋಭಾ ಕರಂದ್ಲಾಜೆ ಅವರಿಗೆ ಕುಯಿಲಾಡಿ ಅಭಿನಂದನೆ ಸಲ್ಲಿಸಿದ್ದಾರೆ.