ಉಡುಪಿ: ಜಿಲ್ಲಾ ಕಾಂಗ್ರೆಸ್ ಸಮಿತಿ, ಪ ಜಾ ವಿಭಾಗದ ವತಿಯಿಂದ ಡಿ.06ರಂದು ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ರವರ 66ನೇ ಮಹಾ ಪರಿನಿರ್ವಾಣ ಕಾರ್ಯಕ್ರಮವನ್ನು ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಂಗ್ರೆಸ್ ಮುಖಂಡ ನಾಗೇಶ್ ಉದ್ಯಾವರ, ಪ ಜಾ ವಿಭಾಗದ ಜಿಲ್ಲಾದ್ಯಕ್ಷ ಜಯ ಕುಮಾರ್, ಕಾಪುದಕ್ಷಿಣ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ನವೀನ್ ಚಂದ್ರ ಅಡ್ವೆ ಮುಂತಾದವರು ಭಾಗವಹಿಸಿದ್ದರು.
ಪ ಜಾ ಘಟಕದ ರಾಜ್ಯ ಸಂಚಾಲಕ ಭಾಸ್ಕರ್ ಪಡುಬಿದ್ರಿಯವರು ಎಲ್ಲರನ್ನು ಸ್ವಾಗತಿಸಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮತ್ತು ಪ ಜಾ ವಿಭಾಗದ ಜಿಲ್ಲಾಧ್ಯಕ್ಷ ಜಯ ಕುಮಾರ್ ಬಾಬಾ ಸಾಹೇಬರ ವಿಚಾರಧಾರೆಯನ್ನು ಹಂಚಿಕೊಂಡರು. ಉಮೇಶ್ ಬನ್ನಂಜೆಯವರು ವಂದಿಸಿದರು. ಪ ಜಾ ಘಟಕದ ರಾಜ್ಯ ಪದಾಧಿಕಾರಿ ದಿನೇಶ್ ನಿರೂಪಿಸಿದರು.