ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆ

ಉಡುಪಿ: ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ, ಬಡಗುಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವಿಶೇಷ ಕರ್ತವ್ಯ ನಿರ್ವಹಣಾಧಿಕಾರಿ, ಉಡುಪಿ ತುಳುಕೂಟದ ಅಧ್ಯಕ್ಷ ಬಿ. ಜಯಕರ್ ಶೆಟ್ಟಿ ಇಂದ್ರಾಳಿ ಇವರು ಸಹಕಾರ ಕ್ಷೇತ್ರದ ಅತ್ಯುನ್ನತ ಗೌರವ, 2022ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಸಹಕಾರ ಕ್ಷೇತ್ರದ ವಿಶಿಷ್ಟ ಸಾಧನೆಗಾಗಿ ಸಹಕಾರ ರತ್ನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.