ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ಉಡುಪಿ: ರಾಜ್ಯ ಸರ್ಕಾರದ ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಅವರು ಸೆಪ್ಟಂಬರ್ 9 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 10.30 ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.