ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ಉಡುಪಿ: ರಾಜ್ಯದ ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಅವರು ಸೆಪ್ಟಂಬರ್ 18 ಮತ್ತು 19 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಸೆ. 18 ರಂದು ಮಧ್ಯಾಹ್ನ 3 ಗಂಟೆಗೆ ಹೆಬ್ರಿ ಹೆಲಿಪ್ಯಾಡ್‌ಗೆ ಆಗಮಿಸುವ ಅವರು ನಂತರ ಹೆಬ್ರಿಯಲ್ಲಿ ಕಸ್ತೂರಿರಂಗನ್ ವರದಿಗೆ ಸಂಬಂಧಪಟ್ಟಂತೆ ಏರ್ಪಡಿಸಲಾಗಿರುವ ಸಭೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಭಾಗವಹಿಸಿ, ನಂತರ ಮಂಗಳೂರಿಗೆ ಹೆಲಿಕಾಪ್ಟರ್ ಮೂಲಕ ತೆರಳಲಿದ್ದಾರೆ.

ಸೆ. 19 ರಂದು ಬೆಳಗ್ಗೆ 9.30 ಕ್ಕೆ ಕಾಪುವಿಗೆ ಆಗಮಿಸುವ ಸಚಿವರು ಬೆಳಿಗ್ಗೆ 10 ಗಂಟೆಗೆ ಕಾಪು ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ತೆರಳಲಿದ್ದಾರೆ.