ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವಿದ್ಯಾಕುಮಾರಿ ಅವರಿಗೆ ಸ್ವಾಗತ

ಉಡುಪಿ: ನೂತನವಾಗಿ ಅಧಿಕಾರವಹಿಸಿಕೊಂಡ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರನ್ನು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪರವಾಗಿ ಸ್ವಾಗತಿಸಿ ಗೌರವಿಸಲಾಯಿತು.

ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಅಪರ ಜಿಲ್ಲಾಧಿಕಾರಿ ಶ್ರೀಮತಿ ವೀಣಾ, ಕನ್ನಡ ಸಂಸ್ಕೃತಿಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ನರಸಿಂಹ ಮೂರ್ತಿ ರಾವ್, ಭುವನಪ್ರಸಾದ ಹೆಗ್ಡೆ, ರಾಮಾಂಜಿ ಉಪಸಿತರಿದ್ದರು.

ಈ ಸಂದರ್ಭದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಸಹಕಾರ ಕೋರಲಾಯಿತು.