ಕಾರ್ಕಳ ಜ್ಞಾನಸುಧಾದದಲ್ಲಿ ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ ಕಾರ್ಕಳ ಜ್ಞಾನಸುಧಾ ಬಾಲಕಿಯರ ಹಾಗೂ ನಿಟ್ಟೆ ಬಾಲಕರ ತಂಡ ಪ್ರಥಮಸ್ಥಾನ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ-ಬಾಲಕಿಯರ ಬಾಸ್ಕೆಟ್‌ಬಾಲ್ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜು
ಪ್ರಥಮ ಸ್ಥಾನವನ್ನು ಹಾಗೂ ಉಡುಪಿಯ ಎಂ.ಜಿ.ಎo ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನವನ್ನು ಪಡೆದಿದೆ. ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ನಿಟ್ಟೆಯ ಡಾ.ಎನ್.ಎಸ್.ಎ.ಎಂ ಕಾಲೇಜು ಹಾಗೂ ದ್ವಿತೀಯ ಸ್ಥಾನವನ್ನು ಉಡುಪಿಯ ಎಂ.ಜಿ.ಎo ಪದವಿ ಪೂರ್ವ ಕಾಲೇಜು ತನ್ನದಾಗಿಸಿಕೊಂಡಿರುತ್ತದೆ. ಪಂದ್ಯಾಟದಲ್ಲಿ ಮೋಸ್ಟ್
ವ್ಯಾಲ್ಯೂಬಲ್ ಆಟಗಾರ ಪ್ರಶಸ್ತಿಯನ್ನು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ ಋತ್ವಿಕಾ ಹಾಗೂ ನಿಟ್ಟೆ ಡಾ.ಎನ್.ಎಸ್.ಎ.ಎಂ ಪದವಿ ಪೂರ್ವ
ಕಾಲೇಜಿನ ಪ್ರಣೀತ್ ಪಡೆದುಕೊಂಡರು. ಸoಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯಕಾರ್ಯನಿರ್ವಹಣಾಧಿಕಾರಿ ದಿನೇಶ್ ಎಂ ಕೊಡವೂರ್ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಎಸ್.ವಿ.ಟಿ ಪದವಿ ಪೂರ್ವ ಕಾಲೇಜಿನ ದೈ.ಶಿಕ್ಷಣ ಉಪನ್ಯಾಸಕಿ ಶ್ರೀಮತಿ
ಪ್ರಭಾವತಿ ಆಗಮಸಿ, ವಿಜೇತ ತಂಡಗಳಿಗೆ ಶುಭ ಹಾರೈಸಿದರು. ಕಾರ್ಕಳ ತಾಲೂಕು ಕ್ರೀಡಾ ಸಂಯೋಜನಾಧಿಕಾರಿ ಶ್ರೀ ಶರತ್ ಭಟ್, ಕಾಲೇಜಿನ ದೈ.ಶಿ.ಉಪನ್ಯಾಸಕಿ ಶ್ರೀಮತಿ ಸೌಜನ್ಯ ಹೆಗ್ಡೆ ಉಪಸ್ಥಿತರಿದ್ದರು. ಆಂಗ್ಲಭಾಷಾ ವಿಭಾಗದ ಮುಖ್ಯಸ್ಥೆ ಶ್ರೀಮತಿ ಸಂಗೀತಾ ಕುಲಾಲ್ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ ವಂದಿಸಿದರು.