ಡಿ. 27 ರಂದು ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ

ಉಡುಪಿ: ಜಿಲ್ಲಾಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮವು ಡಿಸೆಂಬರ್ 27 ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯ ಹಾಗೂ ಉದ್ದಿಮೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಬಗ್ಗೆ ಚರ್ಚಿಸಲಾಗುವುದು.

ಜಿಲ್ಲೆಯ ಕೈಗಾರಿಕೋದ್ಯಮಿಗಳು ತಮ್ಮ ಅಹವಾಲು ಹಾಗೂ ಸಲಹೆಗಳಿದ್ದಲ್ಲಿ ಡಿಸೆಂಬರ್ 20 ರ ಒಳಗಾಗಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ಇವರಿಗೆ ಲಿಖಿತವಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ

ದೂರವಾಣಿ ಸಂಖ್ಯೆ: 0820-2575650 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.