ಉಡುಪಿ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಅಕ್ಟೋಬರ್ 19 ರಂದು ಉಡುಪಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯ ಹಾಗೂ ಉದ್ದಿಮೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಕುರಿತು ಚರ್ಚಿಸಲಾಗುವುದು. ಜಿಲ್ಲೆಯ ಕೈಗಾರಿಕೋದ್ಯಮಿಗಳು ತಮ್ಮ ಅಹವಾಲು ಹಾಗೂ ಸಲಹೆಗಳಿದ್ದಲ್ಲಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ಇವರಿಗೆ ಲಿಖಿತವಾಗಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಉಡುಪಿ ದೂರವಾಣಿ ಸಂಖ್ಯೆ: 0820- 2575650 ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.