ಪೆರ್ಡೂರು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ಸಿಬ್ಬಂದಿಗೆ ಜಿಲ್ಲಾ ಮಟ್ಟದ ವಿಶೇಷ ತರಬೇತಿ

ಹೆಬ್ರಿ: ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಜಿಲ್ಲಾ ಸಹಕಾರ ಯೂನಿಯನ್ ನಿ., ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ನಿ., ಪೆರ್ಡೂರು ಹಾಗೂ ಸಹಕಾರ ಇಲಾಖೆ, ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಕುಂಬಾರರ ಗುಡಿ ಕೈಗಾರಿಕಾ, ಸಹಕಾರ ಸಂಘದ ಹಾಗೂ ಇತರ ಸಹಕಾರ ಸಂಘದ ಸಿಬಂದಿ ವರ್ಗದವರಿಗೆ ಜಿಲ್ಲಾಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮ ಪೆರ್ಡೂರು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು.

ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಪೆರ್ಡೂರು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಕುಲಾಲ್ ವಹಿಸಿದ್ದರು. ರಾಜ್ಯಮಟ್ಟ ಸಂಪನ್ಮೂಲ ವ್ಯಕ್ತಿ ಶ್ರೀಧರ ಪಿ.ಎಸ್. ಉಪನ್ಯಾಸ ನೀಡಿದರು. ಪೆರ್ಡೂರು ಕುಂಬಾರರ ಗುಡಿ ಕೈಗಾರಿಕಾ ಸಂಘದ ಆಡಳಿತ ಮಂಡಳಿ ಸದಸ್ಯರಾದ ಯು. ಸುಂದರ್ ಕುಲಾಲ್ ಅಲೆವೂರು, ಶೇಖರ ಕುಲಾಲ್ ಕುಕ್ಕಿಕಟ್ಟೆ ಹರೀಶ್ ಕುಲಾಲ್ ಹಂದಿಬೆಟ್ಟು ಶ್ಯಾಮಲಾ ಕೆ ಕುಲಾಲ್, ಪ್ರಫುಲ್ಲಾ ಎಸ್. ಕುಲಾಲ್, ಸುಧಾಕರ ಕುಲಾಲ್ ಕನ್ನಾರು ಉಪಸ್ಥಿತರಿದ್ದರು.

ಜಿಲ್ಲಾ ಸಹಕಾರ ಯೂನಿಯನ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್ ಸ್ವಾಗತಿಸಿ, ಪೆರ್ಡೂರು ಕುಂಬಾರರ ಗುಡಿ ಕೈಗಾರಿಕಾ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್ ಕುಲಾಲ್ ಪಟ್ಲ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.