ಜಿಲ್ಲಾ ಮಟ್ಟದ ಕೊರಗರ ಕ್ರೀಡೋತ್ಸವ, ಸಾಂಸ್ಕೃತಿಕ ಉತ್ಸವ

ಉಡುಪಿ, ಫೆ.23: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಉಡುಪಿ ಜಿಲ್ಲಾ ಕೊರಗ ಸಂಘಟನೆ, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಕೊರಗರ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮವು ಫೆಬ್ರವರಿ 26 ಮತ್ತು 27 ರಂದು ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಫೆ. 26 ರಂದು ಸಂಜೆ 5.30 ಕ್ಕೆ ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.