ಜಿಲ್ಲಾ ಮಟ್ಟದ ಯುವಜನೋತ್ಸವ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವು ನವೆಂಬರ್ 19 ರಂದು ಬೆಳಗ್ಗೆ 9.30 ಕ್ಕೆ ನಗರದ ಪುರಭವನದಲ್ಲಿ ನಡೆಯಲಿದೆ.

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಸಂಸದ ಬಿ. ವೈ ರಾಘವೇಂದ್ರ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಲಾಲಾಜಿ ಆರ್ ಮೆಂಡನ್ ಮತ್ತು ಬಿ.ಎಂ ಸುಕುಮಾರ್ ಶೆಟ್ಟಿ, ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ, ಎಸ್.ಎಲ್. ಭೋಜೆಗೌಡ, ಡಾ. ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ದಿ ಮೈಸೂರು  ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ನಗರ ಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ ಹಾಗೂ ಮತ್ತಿತರರು ಭಾಗವಹಿಸಲಿರುವರು.