ನವದೆಹಲಿ: ದೀಪಾವಳಿ ಹಬ್ಬದ ಪ್ರಯುಕ್ತ ಕೇಂದ್ರ ಸರ್ಕಾರವು ದೇಶದ ಜನತೆಗೆ ಸಿಹಿಸುದ್ದಿ ನೀಡಿದ್ದು, ಆತ್ಮನಿರ್ಭರ ಯೋಜನೆಯ ಭಾಗವಾಗಿ ಹಲವು ಪ್ರೋತ್ಸಾಹಕ ಕಾರ್ಯಕ್ರಮಗಳನ್ನು ಘೋಷಿಸಿದೆ.
ದೇಶದ ರೈತರಿಗೆ ಹೆಚ್ಚುವರಿ ತುರ್ತು ಕಾರ್ಯ ಸಂಗ್ರಹ ನಿಧಿಯಿಂದ ನಬಾರ್ಡ್ ಮೂಲಕ 25 ಸಾವಿರ ಕೋಟಿ ರೂಪಾಯಿಗಳನ್ನು ವಿತರಣೆ ಮಾಡಲಾಗಿದೆ. ಕಿಸಾನ್ ಕ್ರೆಡಿಟ್ ಕಾರ್ಡು ಮೂಲಕ ರೈತರಿಗೆ 2.5 ಕೋಟಿ ರೂಪಾಯಿಗಳನ್ನು, 1.4 ಲಕ್ಷ ಕೋಟಿ ರೂಪಾಯಿಗಳನ್ನು ರೈತರಿಗೆ ವಿನಿಮಯ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರೋತ್ಸಾಹಕ ಪ್ಯಾಕೇಜ್:
ಪಿಎಂ ಆವಾಸ್ ಯೋಜನೆಯಡಿ ನಗರ ಪ್ರದೇಶಗಳ ಜನರಿಗೆ ನೀಡಲು 18 ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಹಣವನ್ನು ಬಿಡುಗಡೆ ಮಾಡಲಾಗಿದೆ.
ಹೊಸ ಉದ್ಯೋಗಗಳಿಗೆ ಎರಡು ವರ್ಷಗಳವರೆಗೆ ನಿವೃತ್ತಿ ನಿಧಿಯಡಿ ಕೊಡುಗೆ ನೀಡಲು ಕಂಪೆನಿಗಳಿಗೆ ಕೇಂದ್ರ ಸರ್ಕಾರ ಸಬ್ಸಿಡಿ ನೀಡಲಿದೆ.
ಕೋವಿಡ್-19 ಪುನಶ್ಚೇತನ ಹಂತದಲ್ಲಿ ಹೊಸ ಉದ್ಯೋಗಗಳ ಸೃಷ್ಟಿಗೆ ಪ್ರೋತ್ಸಾಹ ನೀಡಲು ಕೇಂದ್ರ ಸರ್ಕಾರ ಹೊಸ ಆತ್ಮನಿರ್ಭರ ಭಾರತ್ ರೋಜ್ ಗಾರ್ ಯೋಜನೆಯನ್ನು ಘೋಷಿಸಿದೆ.
ಪ್ರತಿ ಇಪಿಎಫ್ಒ ದಾಖಲಾತಿ ಹೊಂದಿದ ಕಂಪೆನಿಗಳು, ಸಂಘ ಸಂಸ್ಥೆಗಳು ಹೊಸ ಉದ್ಯೋಗಿಗಳನ್ನು ನೇಮಕಾತಿ ಮಾಡಿದರೆ ಅಥವಾ ಕಳೆದ ಮಾರ್ಚ್ 1ರಿಂದ ಸೆಪ್ಟೆಂಬರ್ 30ರ ಮಧ್ಯೆ ಉದ್ಯೋಗ ಕಳೆದುಕೊಂಡವರಿಗೆ ಈ ಸೌಲಭ್ಯ ಸಿಗಲಿದೆ. ಕಳೆದ ಅಕ್ಟೋಬರ್ 1ರಿಂದ ಮುಂದಿನ ವರ್ಷ ಜೂನ್ 30ರವರೆಗೆ ನೇಮಕಗೊಂಡವರಿಗೆ ಎರಡು ವರ್ಷಗಳವರೆಗೆ ಪ್ರೋತ್ಸಾಹಕ ಸಿಗಲಿದೆ.
ಒಂದು ರಾಷ್ಟ್ರ, ಒಂದು ರೇಷನ್ ಕಾರ್ಡು ಯೋಜನೆಯನ್ನು ದೇಶದ 28 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಿಗುತ್ತದೆ.
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ರೋಜ್ ಗಾರ್ ಯೋಜನೆಗೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಗ್ರಾಮೀಣ ಉದ್ಯೋಗಕ್ಕೆ 10 ಸಾವಿರ ಕೋಟಿ ರೂಪಾಯಿ.