ಲೋಕಸಭಾ ಚುನಾವಣೆ: ದ.ಕ ಶೇ.58.76%; ಉಡುಪಿ-ಚಿಕ್ಕಮಗಳೂರು 57.49% ಮತದಾನ; ಬೆಂಗಳೂರು ಸೆಂಟ್ರಲ್‌ನಲ್ಲಿ ಕನಿಷ್ಠ ಮತದಾನ

ಬೆಂಗಳೂರು: ಕರ್ನಾಟಕದಲ್ಲಿ ಇಂದು ಮತದಾನ ನಡೆದ 14 ಕ್ಷೇತ್ರಗಳ ಪೈಕಿ 3 ಗಂಟೆವರೆಗಿನ ಮಾಹಿತಿ ಪ್ರಕಾರ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಅಂದರೆ ಶೇ.58.76ರಷ್ಟು ಮತದಾನವಾಗಿದ್ದು, ಉಡುಪಿ-ಚಿಕ್ಕಮಗಳೂರಿನಲ್ಲಿ ಶೇ.57.49ರಷ್ಟು ಮತದಾನವಾಗಿದೆ.

ಬೆಂಗಳೂರು ಸೆಂಟ್ರಲ್‌ನಲ್ಲಿ ಕನಿಷ್ಠ 40.10 ಪ್ರತಿಶತ. ಬೆಂಗಳೂರು ದಕ್ಷಿಣದಲ್ಲಿ ಶೇ.40.77 ಹಾಗೂ ಬೆಂಗಳೂರು ಉತ್ತರದಲ್ಲಿ ಶೇ.41.12ರಷ್ಟು ಮತದಾನವಾಗಿದೆ. ಬೆಂಗಳೂರು ಗ್ರಾಮಾಂತರದಲ್ಲಿ 49.62 ರಷ್ಟು ಮತದಾನವಾಗಿದೆ.