ದ.ಕ‌‌. ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯ ಅಬ್ಬರ: ಒಂದೇ ದಿನ 65 ಮಂದಿಗೆ ಕೊರೊನಾ ಪಾಸಿಟಿವ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಇಂದು ಜಿಲ್ಲೆಯಲ್ಲಿ 65 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ.

ಇಂದು ಜಿಲ್ಲೆಯಲ್ಲಿ ಕೊರೊನಾದಿಂದ ಯಾರೂ ಮೃತಪಟ್ಟಿಲ್ಲ. ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ 741ಕ್ಕೆ ತಲುಪಿದೆ.

ಜಿಲ್ಲೆಯಲ್ಲಿ ಇಂದು 22 ಮಂದಿ ಕೊರೊನಾದಿಂದ ಗುಣಮುಖರಾಗಿದ್ದು, ಈವರೆಗೆ ಒಟ್ಟು 34,813 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಒಟ್ಟು 302 ಆಕ್ವೀವ್ ಕೇಸ್ ಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.