ದಕ್ಷಿಣ ಕನ್ನಡದಲ್ಲಿ ಇಂದು 202 ಮಂದಿಗೆ ಕೊರೊನಾ ಪಾಸಿಟಿವ್: ಐವರು ಕೊರೊನಾಗೆ ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 202 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 9909ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇಂದು 64 ಮಂದಿ ಕೊರೊನಾದಿಂದ ಗುಣಮುಖರಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 7184 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇನ್ನೂ 2424 ಸಕ್ರಿಯ ಕೊರೊನಾ ಪ್ರಕರಣಗಳಿವೆ.
ಐವರು ಕೊರೊನಾಗೆ ಬಲಿ:
ಜಿಲ್ಲೆಯಲ್ಲಿ ಇಂದು ಐವರು ಕೊರೊನಾದಿಂದ ಮೃತಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 299 ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.