ಮಂಗಳೂರು: ದ.ಕ ಜಿಲ್ಲೆಯ ಬಂಟ್ವಾಳದಲ್ಲಿ ಭಾನುವಾರ ಮತ್ತೊಬ್ಬ ಮಹಿಳೆಗೆ ಕೊರೋನಾ ಸೋಂಕು ಪತ್ತೆಯಾಗಿದೆ.
ಖಾಸಗಿ ಆಸ್ಪತ್ರೆಯ ಸಿಬ್ಬಂದಿಯಾಗಿದ್ದ 47 ವರ್ಷದ ಮಹಿಳೆಗೆ ಕೊರೋನಾ ಪಾಸಿಟಿವ್ ಕಂಡು ಬಂದಿದೆ.
ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಮಹಿಳೆಗೆ ಸೋಂಕು ದೃಢಪಟ್ಟಿದ್ದು, ಎ.21ರಂದು ಮೃತಪಟ್ಟಿದ್ದ ಕೇಸ್ ನಂಬರ್ P-432 ವೃದ್ದೆಯ ಸಂಪರ್ಕದಿಂದ ಸೋಂಕು ತಗುಲಿದೆ ಎಂದು ತಿಳಿದುಬಂದಿದೆ.
ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಬಂಟ್ವಾಳದ ವೃದ್ದೆ ಚಿಕಿತ್ಸೆ ಪಡೆದಿದ್ದು, ಎ.21ರಂದು ಅವರು ಮೃತಪಟ್ಟಿದ್ದರು.
ವೃದ್ದೆಯ ಸಂಪರ್ಕದಿಂದ ಸ್ವೀಪರ್ ಕೆಲಸ ಮಾಡುತ್ತಿದ್ದ ಮಹಿಳೆಗೆ ಸೋಂಕು ತಗುಲಿದೆ. ವೃದ್ದೆ ಮೃತಪಟ್ಟ ತಕ್ಷಣ ಆಸ್ಪತ್ರೆ ಸಿಬ್ಬಂದಿಯನ್ನ ಮಂಗಳೂರಿನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.
ಇಂದು ಬಂದ ವರದಿಯಲ್ಲಿ ಮಹಿಳೆಗೆ ಸೋಂಕು ದೃಢಪಟ್ಡಿದೆ.
ಬಂಟ್ವಾಳ ಕುಟುಂಬದ ಇಬ್ಬರು ಸೇರಿ ಹೊರಗಿನ ಮೂವರಿಗೆ ಸೋಂಕು ತಗುಲಿದೆ.
ಇದರಲ್ಲಿ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು, ಮೂವರಿಗೆ ಚಿಕಿತ್ಸೆ ಮುಂದುವರಿದಿದೆ.
ಸದ್ಯ ದ.ಕ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 19ಕ್ಕೆ ಏರಿಕೆಯಾಗಿದ್ದು, ಇದರಲ್ಲಿ 12 ಮಂದಿ ಗುಣಮುಖರಾಗಿ ಡಿಸ್ಚಾರ್ಜ್, 2 ಸಾವು ಮತ್ತು 5 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ರಾಜ್ಯದಲ್ಲಿ ಇಂದು ಪತ್ತೆಯಾದ ಏಕೈಕ ಕೊರೋನಾ ಪಾಸಿಟಿವ್ ಕೇಸ್ ಇದಾಗಿದೆ.