ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾಗೆ ಎಂಟನೇ ಬಲಿಯಾಗಿದ್ದು, ಮಹಾರಾಷ್ಟ್ರದಿಂದ ಬಂದಿದ್ದ 26 ವರ್ಷದ ಯುವಕ ಸಾವನ್ನಪ್ಪಿದ್ದಾರೆ.
ಮಹಾರಾಷ್ಟ್ರದಿಂದ ಬಂದು ಕ್ವಾರೆಂಟೈನ್ ಮುಗಿಸಿ ಮನೆಗೆ ಹೋಗಿದ್ದ ಯುವಕ ಕಿಡ್ನಿ ಸಮಸ್ಯೆ ಹಿನ್ನೆಲೆ ಮತ್ತೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಇಂದು ಸಾವನ್ನಪ್ಪಿದ್ದಾರೆ. ಯುವಕನಿಗೆ ಕೋವಿಡ್ ಪರೀಕ್ಷೆ ವೇಳೆ ಕೊರೋನಾ ಇರುವುದು ದೃಢಪಟ್ಟಿತ್ತು.