ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ಕೊರೊನಾ ಸೋಂಕಿನಿಂದ ಇಂದು ಮತ್ತಿಬ್ಬರು ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನಿಂದ ಬಳಲುತ್ತಿದ್ದ ಇಬ್ಬರು ಇಂದು (ಜು.6)ಮೃತಪಟ್ಟಿದ್ದಾರೆ.
ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಕುತ್ತಾರು ನಿವಾಸಿ 52 ವರ್ಷ ವಯಸ್ಸಿನ ಪುರುಷ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಸೋಮವಾರ ಮೃತಪಟ್ಟಿದ್ದಾರೆ.
ಉಳ್ಳಾಲ ನಿವಾಸಿ 62 ವರ್ಷ ವರ್ಷದ ಪುರುಷನೂ ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 24ಕ್ಕೇರಿದೆ