ದ.ಕ.ಜಿಲ್ಲೆ: ಮಂಗಳವಾರವೂ ‌ನಿರಂತರ ಮಳೆ, ವಿವಧೆಡೆ ಹಾನಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಂಗಳವಾರವೂ‌ ನಿರಂತರ ಮಳೆ ಸುರಿಯುತ್ತಿದ್ದು, ಮಳೆಯಿಂದ ಕೆಲವು ಹಾನಿ ಸಂಭವಿಸಿದೆ.
 
ಜಿಲ್ಲೆಯ ಮೂಡಬಿದಿರೆ, ಪುತ್ತೂರು, ಬಂಟ್ವಾಳ, ಸುಳ್ಯ, ಬೆಳ್ತಂಗಡಿ ಭಾಗಗಳಲ್ಲೂ ಉತ್ತಮ ಮಳೆಯಾಗುತ್ತಿದೆ.
ಮಂಗಳೂರು ಅಲೋಶಿಯಸ್ ಕಾಲೇಜಿನ ರಸ್ತೆಯ ಪಕ್ಕದಲ್ಲಿ ಮಣ್ಣು ಕುಸಿದು ಕೆಲ ಕಾಲ ಸಂಚಾರಕ್ಕೆ ಅಡ್ಡಿಯಾಗಿದೆ. ಅಲ್ಲದೇ ಮಂಗಳೂರು ಹೊರವಲಯದ ಅದ್ಯಪಾಡಿಯಲ್ಲೂ ರಸ್ತೆಗೆ ಮಣ್ಣು ಕುಸಿದು ಕೆಲ ಕಾಲ ಸಂಚಾರಕ್ಕೆ ತೊಂದರೆ ಉಂಟಾಗಿದೆ.