ದ.ಕ.: 1.22ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಭಾನುವಾರ ನಡೆದ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನದಲ್ಲಿ 5 ವರ್ಷದೊಳಗಿನ 1,22,856 ಮಕ್ಕಳಿಗೆ ಲಸಿಕೆ ನೀಡಲಾಯಿತು.
ಭಾನುವಾರ ನಗರದ ಲೇಡಿಘೋಷನ್ ಆಸ್ಪತ್ರೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಅಭಿಯಾನಕ್ಕೆ ಚಾಲ‌ನೆ ನೀಡಿದರು.
ಶಾಸಕರಾದ ವೇದವ್ಯಾಸ ಕಾಮತ್, ಯು.ಟಿ. ಕಾದರ್, ಐವನ್ ಡಿಸೋಜ, ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ರಾವ್, ಲೇಡಿಘೋಷನ್ ಅಧೀಕ್ಷಕಿ ಡಾ. ಸವಿತಾ, ವೆನ್ ಲಾಕ್ ಅಧೀಕ್ಷಕಿ ಡಾ. ರಾಜೇಶ್ವರಿ ದೇವಿ ಇದ್ದರು.
ದ.ಕ. ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ 922 ಬೂತ್ ಗಳನ್ನು, 7 ಸಂಚಾರಿ ಹಾಗೂ ರೈಲು, ಬಸ್, ಏರ್ ಪೋಟ್೯, ಮಾರ್ಕೆಟ್, ಮಾಲ್ ಗಳು ಸೇರಿದಂತೆ ವಿವಿಧ ಜನಸಂದಣಿ ಪ್ರದೇಶಗಳಲ್ಲಿ 26 ಬೂತ್ ಗಳನ್ನು ತೆರೆಯಲಾಗಿತ್ತು. ಜಿಲ್ಲೆಯಲ್ಲಿ 0-5 ವರ್ಷದೊಳಗಿನ  ಒಟ್ಟು 1,48,817 ಮಕ್ಕಳಿಗೆ ಲಸಿಕೆ ನೀಡಲು ಗುರಿ ಇಡಲಾಗಿತ್ತು. ಶೇಕಡಾ 72.56 ಗುರಿ ಸಾಧಿಸಲಾಗಿದೆ.