udupixpress
Home Trending ದ.ಕ. ಜಿಲ್ಲೆಯಲ್ಲಿ ಮತ್ತೊಂದು ಕೊರೊನ ದೃಢ: ಪುತ್ತೂರು ಮೂಲದ ವ್ಯಕ್ತಿಗೆ ಕೊರೊನ

ದ.ಕ. ಜಿಲ್ಲೆಯಲ್ಲಿ ಮತ್ತೊಂದು ಕೊರೊನ ದೃಢ: ಪುತ್ತೂರು ಮೂಲದ ವ್ಯಕ್ತಿಗೆ ಕೊರೊನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಮತ್ತೊಂದು ಕೊರೊನ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಇವರು ಪುತ್ತೂರು ತಾಲೂಕಿನ ಅರ್ಯಾಪು ಗ್ರಾಮದ ವ್ಯಕ್ತಿ ಎಂದು ತಿಳಿದು ಬಂದಿದೆ.
ಮಾ.20 ರಂದು ಮಂಗಳೂರು ಆಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈನಿಂದ ಆಗಮಿಸಿದ್ದರು.
ಮಂಗಳೂರಿನಿಂದ ಖಾಸಗಿ ಟ್ಯಾಕ್ಸಿ ಮೂಲಕ ಪುತ್ತೂರಿಗೆ ಆಗಮಿಸಿದ್ದರು.
ಮಾ. 28ರಂದು ಗಂಟಲಿನಲ್ಲಿ ನೋವು ಕಾಣಿಸಿಕೊಂಡ ಕಾರಣ ಪುತ್ತೂರು ಆಸ್ಪತ್ರೆಗೆ ದಾಖಲು, ಗಂಟಲಿನ ದ್ರವ ತಪಾಸಣೆಗೆ ರವಾನೆಯಾಗಿದ್ದು, ಇಂದು ಬಂದ ವರದಿಯಲ್ಲಿ ಕೊರೊನಾ ದೃಡ ಪಟ್ಟಿದೆ.
ವ್ಯಕ್ತಿಯ ಸಂಪರ್ಕದಲ್ಲಿ ಇದ್ದವರನ್ನು ಸಂಪರ್ಕಿಸಿ ನಿಗಮದಲ್ಲಿ ಇರಿಸಲಾಗಿದೆ ಎನ್ನಲಾಗಿದೆ.
error: Content is protected !!