ದ.ಕ ಜಿಲ್ಲೆಯಲ್ಲಿ ಇಂದು ಮತ್ತೆ 173 ಮಂದಿಯಲ್ಲಿ ಕೊರೊನಾ ಪಾಸಿಟಿವ್
ಮಂಗಳೂರು: ದ.ಕ ಜಿಲ್ಲೆಯಲ್ಲಿ ಇಂದು ಮತ್ತೆ 173 ಮಂದಿಯಲ್ಲಿ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5103ಕ್ಕೆ ಏರಿಕೆಯಾಗಿದೆ.
ಸದ್ಯ 2632 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಉಳಿದಂತೆ 2338 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಕೂಡ 41 ಮಂದಿ ಗುಣಮುಖರಾಗಿರುವ ವರದಿ ಲಭ್ಯವಾಗಿದ್ದು, ಈ ನಡುವೆ ಜಿಲ್ಲೆಯಲ್ಲಿ ಮತ್ತೆ ನಾಲ್ವರು ಸೋಂಕಿಗೆ ಬಲಿಯಾಗಿದ್ದಾರೆ.
ಇಂದು ದೃಢವಾದ ಪಾಸಿಟಿವ್ ಪ್ರಕರಣಗಳ ಪೈಕಿ 21 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ಪತ್ತೆಯಾಗಿದ್ದು, 91 ಐಎಲ್ ಐ ಪ್ರಕರಣಗಳು, 22 ಸಾರಿ ಪ್ರಕರಣಗಳು ದಾಖಲಾಗಿದೆ.
ಹೊರದೇಶದಿಂದ ಪ್ರಯಾಣ ಮುಗಿಸಿ ಬಂದ ಒಬ್ಬರಲ್ಲಿ ಸೋಂಕು ಕಂಡುಬಂದಿದ್ದು, ಹಾಗೂ 38 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.