udupixpress
Home Trending ದ.ಕ. ಜಿಲ್ಲೆಯಲ್ಲಿ ತೀವ್ರಗೊಂಡ ಕಡಲಿನ ಅಬ್ಬರ: ಸಚಿವ ಕೋಟರಿಂದ ಪರಿಶೀಲನೆ

ದ.ಕ. ಜಿಲ್ಲೆಯಲ್ಲಿ ತೀವ್ರಗೊಂಡ ಕಡಲಿನ ಅಬ್ಬರ: ಸಚಿವ ಕೋಟರಿಂದ ಪರಿಶೀಲನೆ

ಮಂಗಳೂರು: ಸೋಮೇಶ್ವರ ಉಚ್ಚಿಲ, ಬಟ್ಟಪ್ಪಾಡಿ, ಉಳ್ಳಾಲ ಮೊಗವೀರ ಪಟ್ನ, ಕೈಕೋ, ಹಿಲರಿಯ ನಗರ, ಪ್ರದೇಶಗಳಲ್ಲಿ ಕಡಲಿನ ಅಬ್ಬರ ಜಾಸ್ತಿಯಾಗಿರುವ ಹಿನ್ನೆಲಯಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದರು.
ಬಳಿಕ ಮಾತನಾಡಿದ ಅವರು ಕಡಲಿನ ಅಬ್ಬರ, ತೀವ್ರತೆ ಜಾಸ್ತಿಯಾಗಿರುವ ಹಿನ್ನೆಲೆಯಲ್ಲಿ, ಸರಕಾರದಿಂದ ಯಾವ ಯಾವ ಕಾರ್ಯ ರೂಪಿಸಬೇಕು, ಮತ್ತು ಜಿಲ್ಲಾಧಿಕಾರಿ ಮತ್ತು ಬಂದರು ಇಲಾಖೆ ಎ.ಡಿ.ಬಿ ಅಧಿಕಾರಿಗಳೊಂದಿಗೆ ಮೀಟಿಂಗ್ ನಡೆಸಿ ತಡೆಗೋಡೆ ಹೇಗೆ ನಿರ್ಮಿಸುವುದು ಮತ್ತು ತುರ್ತಾಗಿ ಯಾವ ಕಾರ್ಯ ಮಾಡಬೇಕುಂಬುದರ ಗಮನ ಕೊಡುತ್ತೇನೆ.
ಸ್ವಾಭಾವಿಕವಾಗಿ ಕಡಲ್ಕೊರೆತದಿಂದಾಗಿ ಅಲ್ಲಿಯ ಮೀನುಗಾರರಿಗೆ, ಮೀನುಗಾರಿಕಾ ವೃತ್ತಿಯಲ್ಲಿ ತೊಡಗಿರುವ ಅನೇಕ ಕುಟುಂಬಗಳಿಗೆ ತೊಂದರೆ ಆದ ಹಿನ್ನೆಲೆಯಲ್ಲಿ ತುರ್ತಾಗಿ ತಡೆಗೋಡೆ ಮಾಡಬೇಕಾದ ಅಗತ್ಯವಿದೆ. 230 ,ಕೋಟಿ ಅನುದಾನದಲ್ಲಿ ಕಡಲ್ಕೊರೆತ ಕಾಮಗಾರಿಯು ಪ್ರಗತಿಯಲ್ಲಿದೆ, ಒಟ್ಟಾರೆಯಾಗಿ ಮೀನುಗಾರರು ಸಂಕಷ್ಟದಿಂದ ಪಾರಾಗಬೇಕೆಂಬುದು ಸರಕಾರದ ಆಶಯವಾಗಿದೆ.
ದ.ಕ.ಜಿಲ್ಲಾ ಬಿ.ಜೆ.ಪಿ.ಪ್ರಧಾನ ಕಾರ್ಯದರ್ಶಿ ಸತೀಶ್ ಕುಂಪಲ, ಉಪಾಧ್ಯಕ್ಷ ಚಂದ್ರಹಾಸ್ ಉಳ್ಳಾಲ್, ಸಂತೋಷ್ ಕುಮಾರ್ ರೈ ಬೋಳಿಯಾರ್,  ಮಂಗಳೂರು ವಿಧಾನ ಸಭಾ ಕ್ಷೇತ್ರದ ಬಿ.ಜೆ.ಪಿ.ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್,ಪ್ರಧಾನ ಕಾರ್ಯದರ್ಶಿ ಹೇಮಂತ್ ಶೆಟ್ಟಿ,  ಮಾಜಿ ಅಧ್ಯಕ್ಷ  ಚಂದ್ರಶೇಖರ್ ಉಚ್ಚಿಲ್, ರಾಜ್ಯ  ಬಿ.ಜೆ.ಪಿ.ಕಾರ್ಯಕಾರಿಣಿ ಸದಸ್ಯ ರವೀಂದ್ರ ಶೆಟ್ಟಿ ಉಳಿದೊಟ್ಟು, ಸೋಮೇಶ್ವರ ಪುರಸಭೆ ಅಧ್ಯಕ್ಷರಾದ ರಾಜೇಶ್ ಉಚ್ಚಿಲ್, ತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ಆಳ್ವ, ತಾಲೂಕು ಪಂಚಾಯತ್ ಸದಸ್ಯರಾದ ರವಿಶಂಕರ್ ಸೋಮೇಶ್ವರ, ನವೀನ್ ಪಾದಲ್ಪಾಡಿ, ಬಿ.ಜೆ.ಪಿ.ಪ್ರಮುಖರಾದ ಸಂಜೀವ ಶೆಟ್ಟಿ ಅಂಬ್ಲಮೊಗರು, ಯಶವಂತ್ ಅಮೀನ್, ಆನಂದ್ ಶೆಟ್ಟಿ ಭಟ್ನಗರ, ಸುರೇಂದ್ರ ಶೆಟ್ಟಿ, ಪ್ರಶಾಂತ್ ಕಾಪಿಕಾಡ್, ಪ್ರವೀಣ್ ಕೊಂಡಾಣ, ಸೋಮೇಶ್ವರ ಪುರಸಭಾ ಆಯುಕ್ತ ವಾಣಿ ಆಳ್ವ, ಉಳ್ಳಾಲ ನಗರಸಭಾ ಆಯುಕ್ತರಾದ ರಾಯಪ್ಪ ಉಪಸ್ಥಿತರಿದ್ದರು.
error: Content is protected !!