ಮಂಗಳೂರು: ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ನಡೆಸುವಂತೆ ಆಗ್ರಹಿಸಿ ಆ. 27 ರಂದು ಬೆಳ್ತಂಗಡಿಯ ತಾಲೂಕು ಕಚೇರಿ ಮುಂಭಾಗದಲ್ಲಿ ದ.ಕ ಮತ್ತು ಉಡುಪಿ ಜಿಲ್ಲೆಯ ಶಾಸಕರಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಪ್ರತಿಭಟನೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಲಾಗುವುದು. ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಲಾಗುವುದು ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.